ಸರ್ಕಾರಿ ಶಾಲೆಗಳಲ್ಲಿ ಓದಿದ ಅನೇಕರು ಮಹಾನ್ ಸಾಧಕರಾಗಿದ್ದಾರೆ.
ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯುವಂತೆ ಅನೇಕ ಸರ್ಕಾರಿ ಶಾಲೆಗಳು ಬೆಳೆಯುತ್ತಿವೆ. ಕಾಂಗ್ರೆಸ್ ಸರ್ಕಾರ ಹಿಂದೆಂದೂ ಮಾಡದ ವಿನೂತನ ಕಾರ್ಯಕ್ರಮಗಳನ್ನು ಶಿಕ್ಷಣ ಇಲಾಖೆಯಲ್ಲಿ ಜಾರಿಮಾಡಿದೆ.
ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಶೂ-ಸಾಕ್ಸ್, ಆರು ದಿನ ಮೊಟ್ಟೆ, ಬಾಳೆಹಣ್ಣು, ರಾಗಿಮಾಲ್ಟ್, ಕೆನೆಬರಿತ ಹಾಲು ಹಾಗೂ ನುರಿತ ಸಂಪನ್ಮೂಲ ಶಿಕ್ಷಕರು, ಎಸ್.ಎಸ್.ಎಲ್.ಸಿ ಮೂರು ಪರೀಕ್ಷೆಗಳು, ಶನಿವಾರ ಸಂಭ್ರಮ, ದ್ವಿಭಾಷಾ ನೀತಿ, ಮಕ್ಕಳಿಗೆ ಮೌಲ್ಯಧಾರಿತ ಹಾಗೂ ನೈತಿಕ ಶಿಕ್ಷಣ, ಉಚಿತ ವಿದ್ಯುತ್ ಪೂರೈಕೆ ಹಾಗೂ 900 ಕೆ.ಪಿ.ಎಸ್ ಶಾಲೆಗಳನ್ನು ಸೇರಿದಂತೆ ಅನೇಕ ಯೋಜನೆಗಳನ್ನು ಪಕ್ಷಾತೀತವಾಗಿ, ಜಾತ್ಯತೀತವಾಗಿ ಜಾರಿಮಾಡಿದೆ.
ಕಾಂಗ್ರೆಸ್ ಸರ್ಕಾರ ಬಂದ ಒಂದೂವರೆ ವರ್ಷದೊಳಗೆ 13,000 ಶಿಕ್ಷಕರನ್ನು ನೇಮಕ ಮಾಡಿಕೊಂಡ ಕೀರ್ತಿ ಸನ್ಮಾನ್ಯ ಶಿಕ್ಷಣ ಮಂತ್ರಿಗಳಾದ @madhu_bangarappa ಅವರಿಗೆ ಸಲ್ಲುತ್ತದೆ. ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಒಂದೇ ಬಾರಿಗೆ 51,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಸರ್ಕಾರ ಈಗಾಗಲೇ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲು ಸಕಲ ಸಿದ್ಧತೆಗಳನ್ನು ಕೈಗೊಂಡಿದೆ. ಇವೆಲ್ಲವೂ ಶಿಕ್ಷಣ ಕ್ರಾಂತಿಗೆ ಉದಾಹರಣೆಯಲ್ಲವೇ…?
ಸಮಾಜದ ಕಟ್ಟ ಕಡೆಯ ವ್ಯಕ್ತಿಯೂ ಉತ್ತಮ ಶಿಕ್ಷಣ ಪಡೆದುಕೊಳ್ಳಬೇಕು, ಯಾರೊಬ್ಬರೂ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಭಾವನೆ ಹೊಂದಿರುವ ಶಿಕ್ಷಣ ಸಚಿವರ ಉದ್ದೇಶ ಒಳ್ಳೇದಲ್ಲವೇ…?
ಸಕಲವೂ ಶಿಕ್ಷಣದಿಂದಲೇ..!

