ಸಾಲ ಸೌಲಭ್ಯ : ಬೆಸ್ತ ಜನಾಂಗದವರಿAದ ಅರ್ಜಿ ಆಹ್ವಾನತುಮಕೂರು(ಕ.ವಾ.)ಸೆ.೭: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮವು ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ನೀಡಲು ಬೆಸ್ತ ಜನಾಂಗದವರಿAದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಫಲಾಪೇಕ್ಷಿಗಳು ಸಾಲ ಸೌಲಭ್ಯಕ್ಕಾಗಿ ಅರಿವು-ಶೈಕ್ಷಣಿಕ(ಈಡಿesh Sಣuಜeಟಿಣs) ಹಾಗೂ ಅರಿವು-ಶೈಕ್ಷಣಿಕ/ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗ ಯೋಜನೆ(ನವೀಕರಣ) ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ

ಸಾಲ ಸೌಲಭ್ಯ : ಬೆಸ್ತ ಜನಾಂಗದವರಿAದ ಅರ್ಜಿ ಆಹ್ವಾನತುಮಕೂರು(ಕ.ವಾ.)ಸೆ.೭: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮವು ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ನೀಡಲು ಬೆಸ್ತ ಜನಾಂಗದವರಿAದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಫಲಾಪೇಕ್ಷಿಗಳು ಸಾಲ ಸೌಲಭ್ಯಕ್ಕಾಗಿ ಅರಿವು-ಶೈಕ್ಷಣಿಕ(ಈಡಿesh Sಣuಜeಟಿಣs) ಹಾಗೂ ಅರಿವು-ಶೈಕ್ಷಣಿಕ/ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗ ಯೋಜನೆ(ನವೀಕರಣ) ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ಪೋರ್ಟಲ್ ಮೂಲಕ ಗ್ರಾಮ ಒನ್/ ಕರ್ನಾಟಕ ಒನ್/ ತುಮಕೂರು ಒನ್/ ಬೆಂಗಳೂರು ಒನ್ ಸೇವಾ ಕೇಂದ್ರದಲ್ಲಿ ಸೆಪ್ಟೆಂಬರ್ ೩೦ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ hಣಣಠಿs://ಚಿmbigಚಿಡಿಚಿಜeveಟoಠಿmeಟಿಣ.ಞಚಿಡಿಟಿಚಿಣಚಿಞಚಿ.gov.iಟಿಅಥವಾ ದೂ.ಸಂ: ೦೮೦-೨೨೮೬೪೦೯೯ ಅಥವಾ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ ೦೮೧೬-೨೦೦೫೦೦೮ನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. *-*-*-*-*-*-*ವಿಜೃಂಭಣೆಯಿAದ ತುಮಕೂರು ದಸರಾ ಉತ್ಸವ ಆಚರಣೆ: ಡಾ: ಜಿ. ಪರಮೇಶ್ವರ್ತುಮಕೂರು(ಕ.ವಾ.)ಸೆ.೭: ನಾಡಹಬ್ಬ ತುಮಕೂರು ದಸರಾ ಉತ್ಸವವನ್ನು ಈ ಬಾರಿಯೂ ವಿಜೃಂಭಣೆಯಿAದ ಆಚರಿಸುವ ಮೂಲಕ ತುಮಕೂರಿನ ಕಲೆ, ಸಂಸ್ಕೃತಿ ಹಾಗೂ ಪ್ರತಿಭೆಯನ್ನು ರಾಜ್ಯದ ಗಮನ ಸೆಳೆಯುವಂತೆ ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ೨೦೨೬ರ ದಸರಾ ಉತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರುಪ್ರತಿ ವರ್ಷದಂತೆ ಈ ವರ್ಷವೂ ದಸರಾ ಉತ್ಸವವನ್ನು ವಿಶೇಷ ಹಾಗೂ ಅರ್ಥಪೂರ್ಣವಾಗಿ ಆಚರಿಸಬೇಕು. ಉತ್ಸವದಲ್ಲಿ ಹೊಸತನವನ್ನು ಪರಿಚಯಿಸುವ ಮೂಲಕ ತುಮಕೂರನ್ನು ಎಲ್ಲರೂ ಗುರುತಿಸುವಂತಹ ರೀತಿಯಲ್ಲಿ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಹೇಳಿದರು.ದಸರಾ ಉತ್ಸವವು ಕೇವಲ ಮನರಂಜನಾ ಕಾರ್ಯಕ್ರಮವಾಗದೆ ಮಕ್ಕಳಿಗೆ, ಯುವಕರಿಗೆ ಹಾಗೂ ಸ್ಥಳೀಯ ಕಲಾವಿದರಿಗೆ ಉತ್ತಮ ವೇದಿಕೆಯಾಗಬೇಕು. ಯುವ ಕಲಾವಿದರು, ನೃತ್ಯ ತಂಡಗಳು ಸೇರಿದಂತೆ ಸ್ಥಳೀಯ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸುವ ಮೂಲಕ ಅವರ ಪ್ರತಿಭೆ ಅನಾವರಣಕ್ಕೆ ಅವಕಾಶ ಮಾಡಿಕೊಡಬೇಕು ಎಂದು ತಿಳಿಸಿದರು.ಅಮಾನಿಕೆರೆ ಪ್ರಮುಖ ಆಕರ್ಷಣೆಯಾಗಲಿತುಮಕೂರು ನಗರದ ಅಮಾನಿಕೆರೆಯನ್ನು ದಸರಾ ಸಂದರ್ಭದಲ್ಲಿ ಆಕರ್ಷಕವಾಗಿ ಅಲಂಕರಿಸಿ, ವಿದ್ಯುತ್ ದೀಪಾಲಂಕಾರ ಸೇರಿದಂತೆ ವಿವಿಧ ಅಲಂಕಾರಗಳಿAದ ಕಲರ್‌ಫುಲ್ ಆಗಿ ರೂಪಿಸಬೇಕು. ಅಮಾನಿಕೆರೆಯನ್ನು ದಸರಾ ಉತ್ಸವದ ಪ್ರಮುಖ ಆಕರ್ಷಣೆಯನ್ನಾಗಿ ಮಾಡುವ ಮೂಲಕ ಸಾರ್ವಜನಿಕರನ್ನು ಸೆಳೆಯುವಂತಹ ವಾತಾವರಣ ನಿರ್ಮಿಸಬೇಕು ಎಂದು ಅವರು ಸೂಚಿಸಿದರು.ನಗರದ ಪ್ರಮುಖ ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ವಿದ್ಯುತ್ ದೀಪಾಲಂಕಾರ ಮಾಡುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದ ಅವರು, ಉತ್ಸವದ ಸಂದರ್ಭದಲ್ಲಿ ಇಡೀ ನಗರ ಹಬ್ಬದ ವಾತಾವರಣದಿಂದ ಕಂಗೊಳಿಸುವAತೆ ಕ್ರಮ ಕೈಗೊಳ್ಳಬೇಕು ಎಂದರು.

ತುಮಕೂರು ದಸರಾ ಉತ್ಸವವನ್ನು ಅಕ್ಟೋಬರ್ ೧೧ ರಿಂದ ೨೧ರವರೆಗೆ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದ್ದು, ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ವಿ. ಅಶ್ವಿಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಸೇರಿದಂತೆ ನಹೀದಾ ಜಮ್ ಜಮ್, ಮುರಳೀಧರ ಹಾಲಪ್ಪ, ಲಕ್ಷö್ಮಣ್ ದಾಸ್ ಹಾಗೂ ವಿವಿಧ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.