ನೊಂದವರಿಗೆ ನ್ಯಾಯ ಕೊಡಿಸೋದು ಪೊಲೀಸರ ಕರ್ತವ್ಯ ಇತ್ತೀಚೆಗೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದೆ ಇದರ ನಿಯಂತ್ರಣಕ್ಕೆ ತರಬೇತಿ ಅಗತ್ಯ ಖಾದರ್

ನೊಂದವರಿಗೆ ನ್ಯಾಯ ಕೊಡಿಸೋದು ಪೊಲೀಸರ ಕರ್ತವ್ಯ
ಇತ್ತೀಚೆಗೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದರ ನಿಯಂತ್ರಣಕ್ಕೆ ತರಬೇತಿ ಅಗತ್ಯ : ಖಾದರ್
ಈ ໖.
ದಿನ
ತುಮಕೂರು, ಏ. 2- ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪೊಲೀಸ್ ಧ್ವಜ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಪೊಲೀಸ್ ಧ್ವಜ ಬಿಡುಗಡೆ ಮಾಡಿದ ನಿವೃತ್ತ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಬ್ದುಲ್ ಖಾದರ್ ಗೌರವ * ರಕ್ಷೆ ಸ್ವೀಕರಿಸಿ ಮಾತನಾಡಿ, ನಾನು ಸಬ್ ಇನ್ಸ್ಪೆಕ್ಟರ್ ಆಗಿದ್ದ ವೇಳೆ ಸಿರಾ ಬಳಿ ನಡೆದ ಶೇಂಗಾ ಬೆಳೆ ರೈತರ ಪ್ರತಿಭಟನೆ ಸಂದರ್ಭದಲ್ಲಿ ಮೇಲಾಧಿಕಾರಿಗಳ ಅಸಮರ್ಪಕ ನಿರ್ವಹಣೆಯಿಂದ ದಕ್ಷ, ಪ್ರಾಮಾಣಿಕ ಪೊಲೀಸ್ ತನ್ನ ನಡೆದ ಅಧಿಕಾರಿಯಾಗಿದ್ದ ಸಾಯಿಪ್ರಕಾಶ್ ರವರ ದಿಗೆ ಹತ್ಯೆಯಾಯಿತು ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆಯ ಮೇಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕಾಗಿದೆ ಎಂದರು.
ಈ
໖. ದಿಗೆ ಮ’
ನಾನು ಸುಮಾರು 30 ವರ್ಷಗಳ ಕಾಲ ತುಮಕೂರು ಜಿಲ್ಲೆಯೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದೇನೆ. ನನಗೆ ತುಮಕೂರು ಮಾತೃ ಜಿಲ್ಲೆಯಾಗಿ ಬಿಟ್ಟಿದೆ. ಅಷ್ಟರ ಮಟ್ಟಿಗೆ ನನ್ನ ಮತ್ತು ತುಮಕೂರಿನ ಸಂಬಂಧ
ಬೆಸೆದುಕೊಂಡಿದೆ ಎಂದರು.
ಕಾನೂನು ಸುವ್ಯವಸ್ಥೆ ಕಾಪಾಡುವುದು, ಅಪರಾಧಗಳ ನಿಯಂತ್ರ ಮತ್ತು ಪತ್ತೆ ಎಲ್ಲವೂ ಪೊಲೀಸ್ ಇಲಾಖೆಯ ಜವಾಬ್ದಾರಿಯಾಗಿದೆ. ಇತ್ತೀಚೆಗೆ ನಿಯಂತ್ರಣ ಇಲ್ಲದೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅಪರಾಧಗಳ ಪಟ್ಟಿಯಲ್ಲಿ ಸೈಬರ್ ಅಪರಾಧ ಮುಂಚೂಣಿಯಲ್ಲಿದೆ. ಇದರ ನಿಯಂತ್ರಕ್ಕೆ ಸಮರ್ಪಕವಾಗಿ ತರಬೇತಿ ಮತ್ತು ಸೌಲಭ್ಯಗಳ ಅಗತ್ಯವಿದೆ ಎಂದು ಅವರು ಹೇಳಿದರು.
ನೀಡಿದರು.
ಬಡವರು, ಅಸಹಾಯಕರು ಅವರ ಕೂಲಿ ಕೆಲಸ ಬಿಟ್ಟು ಪೊಲೀಸ್ ಠಾಣೆಗಳಿಗೆ ಅಲೆಯುವಂತಾಗಬಾರದು. ದಯವಿಟ್ಟು ಪೊಲೀಸರು ಅಸಹಾಯಕರಿಗೆ ಅಶಕ್ತರಿಗೆ, ಮಹಿಳೆಯರಿಗೆ, ವೃದ್ಧರಿಗೆ ಆದ್ಯತೆ ಮೇರೆಗೆ ಕೆಲಸ ಮಾಡಿಕೊಡಬೇಕು ಎಂದು ಅವರು ಹೇಳಿದರು.ಪೊಲೀಸರು ಸದಾ ಒತ್ತಡದಲ್ಲಿ ಕಾರ್ಯ ನಿರ್ವಹಿಸಬೇಕು. ಹಾಗಾಗಿ ಪ್ರತಿನಿತ್ಯವೂ ವ್ಯಾಯಾಮ, ಯೋಗಾಭ್ಯಾಸ, ಆಟೋಟಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ನೊಂದವರಿಗೆ ನ್ಯಾಯ ಒದಗಿಸುವ ಕೆಲಸವನ್ನು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಮಾಡಬೇಕು. ಇದೊಂದು ಪುಣ್ಯದ ಕೆಲಸ ಎಂದರು.ಪೊಲೀಸ್ ಇಲಾಖೆಯಲ್ಲಿ ದಿನೇ ದಿನೇ ಕೆಲಸ ಹೆಚ್ಚಾಗುತ್ತಲೇ ಇರುತ್ತದೆ. ಯಾವುದೇ ಕಾರಣಕ್ಕೂ ಕಡಿಮೆಯಾಗುವುದಿಲ್ಲ. ಆದ್ದ-ರಿಂದ ಆದ್ಯತೆ ಮೇರೆಗೆ ಕೆಲಸ ಮಾಡಬೇಕು. ಅದರಲ್ಲೂ ನೊಂದವರಿಗೆ, ಅನ್ಯಾಯಕ್ಕೆ ಒಳಗಾದವರಿಗೆ ಆದ್ಯತೆ ಮೇರೆಗೆ ಪೊಲೀಸರು ಕೆಲಸ ಮಾಡಿಕೊಡಬೇಕು ಎಂದು ಸಲಹೆ
ಪ್ರಾಸ್ತಾವಿಕ ನುಡಿಗಳನ್ನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ., 1965 ರ ಏ. 2 ರಂದು ಪೊಲೀಸ್ ಧ್ವಜ ದಿನಾಚರಣೆ ಜಾರಿಗೆ ಬಂತು. ಪೊಲೀಸ್ ಇಲಾಖೆಯಲ್ಲಿ ಒತ್ತಡದಲ್ಲಿ ಕೆಲಸ ಮಾಡಿ ನಿವೃತ್ತಿ ಹೊಂದಿದವರಿಗೆ ಕಲ್ಯಾಣ ಕಾರ್ಯಕ್ರಮ ಹಾಕಿಕೊಳ್ಳುವಂತಹ ಕಾರ್ಯಕ್ರಮ ಇದಾಗಿದೆ ಎಂದರು.
ಪೊಲೀಸ್ ಧ್ವಜಗಳನ್ನು ಮಾರಾಟ ಮಾಡಿ ನಿಧಿ ಸಂಗ್ರಹ ಮಾಡಲಾಗುತ್ತದೆ. ಈ ನಿಧಿ ಸಂಗ್ರಹ ಮಾಡಿದ ಹಣವನ್ನು ನಿವೃತ್ತ ಪೊಲೀಸ್
ಅಧಿಕಾರಿಗಳ ಕ್ಷೇಮಾಭಿವೃದ್ಧಿಗೆ ಹಾಗೂ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿಗೆ ನೀಡಲಾಗುವುದು ಎಂದರು.
ಜಿಲ್ಲೆಯಲ್ಲಿ ನಿವೃತ್ತ ಪೊಲೀಸ್ ಕಲ್ಯಾಣ ಖಾತೆಯ ನಿಶ್ಚಿತ ಠೇವಣಿಯಲ್ಲಿ 20,40000 ರೂ. ಉಳಿತಾಯ ಖಾತೆಯಲ್ಲಿ 23,26,562 ರೂ. ಇರುತ್ತದೆ. 2025ನೇ ಸಾಲಿನಲ್ಲಿ ಪೊಲೀಸ್ ಧ್ವಜಗಳನ್ನು ಮಾರಾಟ ಮಾಡಿದ 26.95.250 ರೂ. ಸಂಗ್ರಹವಾಗಿರುತ್ತದೆ. ಈ ಪೈಕಿ ಶೇ. 50 ರಷ್ಟು 13,47625 ರೂ.ಗಳನ್ನು ಕೇಂದ್ರ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ನಿಧಿಗೆ ನೀಡಲಾಗಿರುತ್ತದೆ. ಉಳಿದ ಶೇ. 50 ರಷ್ಟನ್ನು ಈ ಘಟಕದ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ನಿಧಿಗೆ ಜಮಾ ಮಾಡಲಾಗಿದೆ ಎಂದರು.
ಸಮಾರಂಭದಲ್ಲಿ ಅಡಿಷನಲ್ ಎಸ್ಪಿಗಳಾದ ಗೋಪಾಲ್, ಪುರುಷೋತ್ತಮ್, ಡಿವೈಎಸ್ಪಿ ಚಂದ್ರಶೇಖರ್, ನಿವೃತ್ತ ಅಡಿಷನಲ್ ಎಸ್ಪಿ ಅಬ್ದುಲ್ ಖಾದರ್ ಪತ್ನಿ ತಬುಸಮ್ ಸೇರಿದಂತೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳು ಅಧಿಕಾರಿಗಳು, ಸಿಬ್ಬಂದಿ ಹಾಗೂ ನಿವೃತ್ತ ಪೊಲೀಸರು ಭಾಗವಹಿಸಿದ್ದರು.

