ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ ವಹಿಸಿಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆತುಮಕೂರು : ಬೇಸಿಗೆ ಪ್ರಾರಂಭವಾಗಿದ್ದು ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀಡಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಅಶ್ವಿಜಾ ಬಿ.ವಿರವರು ತಿಳಿಸಿದರು

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ ವಹಿಸಿಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆತುಮಕೂರು : ಬೇಸಿಗೆ ಪ್ರಾರಂಭವಾಗಿದ್ದು ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀಡಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಅಶ್ವಿಜಾ ಬಿ.ವಿರವರು ತಿಳಿಸಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಬೇಸಿಗೆಯಲ್ಲಿ ಗ್ರಾಮೀಣ ಭಾದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ದೂರುಗಳು ಬರಲು ಪ್ರಾರಂಭವಾಗಿವೆ. ಗ್ರಾಮಗಳಲ್ಲಿ ನೀರಿನ ಸಮಸ್ಯೆಯಾದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಬಗ್ಗೆ ಮಾಹಿತಿ ಪಡೆದು ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದರು.ಗ್ರಾಮ ಪಂಚಾಯಿತಿ ಒಡೆತನದಲ್ಲಿರುವ ಸರ್ಕಾರಿ ಬೋರ್ ವೆಲ್/ಕೊಳವೆ ಬಾವಿಗಳಲ್ಲಿ ನೀರಿನ ಸಮಸ್ಯೆಯಾದಲ್ಲಿ ಖಾಸಗಿ ಬೋರ್ ವೆಲ್ ಗಳ ಮೂಲಕ ನೀಡಿ ಒಗಗಿಸಲು ಸೂಕ್ತ ಕ್ರಮ ಕೈಗೊಳ್ಳಲು ತಿಳಿಸಿದರು.ಗ್ರಾಮೀಣ ಭಾಗದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಸರಿಯಾಗಿ ಕಾರ್ಯನಿರ್ವಹಿಸದೇ ನಿಷ್ಕ್ರಿಯಗೊಂಡಿದ್ದರೆ ಅವುಗಳ ಬಗ್ಗೆ ಕ್ರಮ ಕೈಗೊಳ್ಳಬೇಕು ಹಾಗೂ ಯಾವುದೇ ಕಾರಣಕ್ಕು ಯಾವ ಗ್ರಾಮದಲ್ಲಿಯೂ ನೀಡು ಮಲಿನವಾಗದಂತೆ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಅಧಿಕಾರಿಗಳಿಗೆ ತಿಳಿಸಿದರು.ತೆರಿಗೆ ಸಂಗ್ರಹದ ಬಗ್ಗೆ ಪರಿಶೀಲನೆ ಮಾಡಿದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಕಳೆದ ಸಾಲಿನಲ್ಲಿ ಶೇ 100 ಕ್ಕಿಂತ ಹೆಚ್ಚು ತೆರಿಗೆ ಸಂಗ್ರಹ ಮಾಡಿದ ಗ್ರಾಮ ಪಂಚಾಯಿತಿಗಳಿಗೆ ಅಭಿನಂದನೆ ತಿಳಿಸಿದರು. ತೆರಿಗೆ ಸಂಗ್ರಹ ಅಭಿಯಾನದವನ್ನು ಕೈಗೊಂಡು ಕರ ವಸೂಲಿಗಾರರು, ವಾಟರ್ ಮೆನ್, ಕೃಷಿ ಸಖಿ, ಪಶು ಸಖಿ, ಸ್ವ ಸಹಾಯ ಸಂಘದ ಮಹಿಳೆಯರು ಗ್ರಾಮಗಳಲ್ಲಿ ತೆರಿಗೆ ಸಂಗ್ರಹ ಕುರಿತಂತೆ ಜನರಲ್ಲಿ ಅರಿವು ಮೂಡಿಸಬೇಕು ಎಂದರು. ಮುಂಬರುವ ಡಿಸೆಂಬಂರ್ ತಿಂಗಳೊಳಗಾಗಿ ತೆರಿಗೆ ಸಂಗ್ರಹದ ಗುರಿಯನ್ನು ತಲುಪಲು ಕಟ್ಟನಿಟ್ಟಿನ ಸೂಚನೆ ನೀಡಲಾಯಿತು. ಮುಂದುವರೆದು ಇ-ಸ್ವತ್ತು ಬಗ್ಗೆ ಮಾತನಾಡಿದ ಅಶ್ವಿಜಾ ಬಿ.ವಿ, ಜನರ ಆಸ್ತಿಗಳಿಗೆ ಇ-ಸ್ವತ್ತು ಮಾಡಿಕೊಡಲು ವಿಳಂಬವಾಗದಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು. ನಂತರ ಮಾತನಾಡಿದ ಅವರ ಜಿಲ್ಲೆಯಲ್ಲಿ ಸ್ವಚ್ಛ ಶನಿವಾರ ಅಭಿಯಾನವನ್ನು ಯಶಸ್ವಿಯಾಗಿ ಕೈಗೊಳ್ಳಬೇಕು. ಸಾರ್ವಜನಿಕ ಸ್ಥಳಗಳಾದ ಬಸ್ ಸ್ಟಾಂಡ್, ಆಸ್ಪತ್ರೆ, ಶಾಲೆ, ಸಂತೆ ಬೀದಿ ಹಾಗೂ ವಿವಿಧ ಪ್ರದೇಶಗಳಲ್ಲಿ ಕಸ ಇಲ್ಲದಂತೆ ಕಸ ಸಂಗ್ರಹ ಮಾಡಿ ಸ್ವಚ್ಛ ಗ್ರಾಮಗಳನ್ನಾಗಿಸಬೇಕು ಎಂದರು.ಸಭೆಯಲ್ಲಿ ನರೇಗಾ ಯೋಜನೆ, ಜಲ ಜೀವನ್ ಮಿಷನ್, ಸ್ವಚ್ಛಭಾರತ್ ಮಿಷನ್ ಸೇರಿದಂತೆ ವಿವಿಧ ಯೋಜನೆಗಳ ಬಗ್ಗೆ ಪ್ರಗತಿ ಪರಿಶೀಲನೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಉಪಕಾರ್ಯದರ್ಶಿ (ಅಭಿವೃದ್ಧಿ), ಉಪಕಾರ್ಯದರ್ಶಿ (ಆಡಳಿತ), ಮುಖ್ಯ ಯೋಜನಾಧಿಕಾರಿಗಳು, ಮುಖ್ಯ ಲೆಕ್ಕಾಧಿಕಾರಿಗಳು, ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.

