Inauguration of Tumkur University’s Gyansiri Campus and various new buildings

ತುಮಕೂರಿನ ಬಿದರಕಟ್ಟೆಯಲ್ಲಿ ಇಂದು ತುಮಕೂರು ವಿಶ್ವವಿದ್ಯಾನಿಲಯದ ಜ್ಞಾನಸಿರಿ ಕ್ಯಾಂಪಸ್ ಹಾಗೂ ವಿವಿಧ ನೂತನ ಕಟ್ಟಡಗಳ ಉದ್ಘಾಟನೆಯನ್ನು ಗೌರವಾನ್ವಿತಾ ರಾಜ್ಯಪಾಲರಾದ ಶ್ರೀ Dr. ಥಾವರ್ ಚಂದ್ ಗೆಹ್ಲೋಟ್ ರವರು ನೆರವೇರಿಸಿದರು.ದೇಶದಲ್ಲಿ ಪ್ರತಿವರ್ಷ 12 ಲಕ್ಷ ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಪದವೀಧರರು ಹೊರಬರುತ್ತಿದ್ದಾರೆ. ಇದರಿಂದ ಜಗತ್ತಿನಾದ್ಯಂತ ಪ್ರತಿಭೆಗಳ ಮಹಾಪೂರವೇ ಹರಿಯುತ್ತಿದೆ. ಅಂದಿನ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರೂ ಅವರು ಶಿಕ್ಷಣಕ್ಕೆ ಒತ್ತು ನೀಡಿದ ಪರಿಣಾಮ ಶಿಕ್ಷಣ ಕ್ರಾಂತಿಯಾಗಿದೆ. ಯುವ ಸಮುದಾಯ ಆಧುನಿಕ ಜಗತ್ತಿಗೆ ಒಗ್ಗಿಕೊಳ್ಳಬೇಕಿದೆ. ಎಐ ಮತ್ತು ರೋಬೋಟಿಕ್ ತಂತ್ರಜ್ಞಾನದಂತಹ ಹೊಸ ಅನ್ವೇಷಣೆಗಳತ್ತ ಗಮನ ಹರಿಸಬೇಕು. ಬದಲಾವಣೆಗಳತ್ತ ಕಲಿಕೆಗೆ ದೃಷ್ಟಿಹರಿಸಬೇಕು.ತುಮಕೂರು ಜಿಲ್ಲೆ ಈಗಾಗಲೇ ಶಿಕ್ಷಣ ಕಾಶಿ ಎಂಬುದನ್ನು ಸಾಬೀತು ಮಾಡಿದೆ. ಮೂರು ವೈದ್ಯಕೀಯ ಕಾಲೇಜುಗಳು, ಎಂಜಿನಿಯರಿಂಗ್ ಕಾಲೇಜುಗಳು, ಪ್ರತಿ ತಾಲೂಕಿನಲ್ಲೂ ಪದವಿ ಕಾಲೇಜುಗಳು ಇದ್ದು, ಗ್ರಾಮೀಣ ಪ್ರದೇಶದ ಬಡವರಿಗೆ, ಪರಿಶಿಷ್ಟ ಹಾಗೂ ಹಿಂದುಳಿದ ಬಡ ವಿದ್ಯಾರ್ಥಿಗಳು ಸೇರಿದಂತೆ ಅಪಾರ ಪ್ರಮಾಣದಲ್ಲಿ ಅನುಕೂಲವಾಗುತ್ತಿದೆ. ಪ್ರಸ್ತುತ ತುಮಕೂರು ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್‌ಗೆ ಹೆದ್ದಾರಿ ಸಂಪರ್ಕ ರಸ್ತೆ, ಬೋಧಕ ಸಿಬ್ಬಂದಿ ಸೇರಿದಂತೆ ಹಣಕಾಸಿನ ನೆರವು ಅಗತ್ಯವಿದೆ. ಸರ್ಕಾರ ಮುಂದಿನ ದಿನಗಳಲ್ಲಿ ಅಗತ್ಯ ನೆರವು ನೀಡಲಿದೆ ಎಂದು ಕಾರ್ಯಕ್ರಮವನ್ನು ಉದ್ದೇಶಿಸಿ ಮಾನ್ಯ ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಜಿ ಪರಮೇಶ್ವರ್ ರವರು ಮಾತನಾಡಿದರು.ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವರಾದ ಎಂ.ಸಿ. ಸುಧಾಕರ್ ರವರು, ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಟಿ.ಬಿ.ಜಯಚಂದ್ರ ರವರು, ಶಾಸಕರುಗಳಾದ ಬಿ.ಸುರೇಶ್‌ಗೌಡರವರು , ಜಿ.ಬಿ. ಜ್ಯೋತಿ ಗಣೇಶ ರವರುತುಮಕೂರು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಎಂ.ವೆಂಕಟೇಶ್ವರಲು ಮುಂತಾದವರು ಉಪಸ್ಥಿತರಿದ್ದರು‌.

Inauguration of Tumkur University's Gyansiri Campus and various new buildings
ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಸ್ಲಂ ಜನರಿಗೆ ಹಕ್ಕುಪತ್ರ ವಿತರಣೆಗೆ* *ಆಗ್ರಹ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ* *ಪ್ರತಿಭಟನೆ

*ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಸ್ಲಂ ಜನರಿಗೆ ಹಕ್ಕುಪತ್ರ ವಿತರಣೆಗೆ* *ಆಗ್ರಹ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ* *ಪ್ರತಿಭಟನೆ* ಇಂದು ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ತುಮಕೂರು ಜಿಲ್ಲೆಯಲ್ಲಿರುವ ಸ್ಲಂ ನಿವಾಸಿಗಳಿಗೆ ಸರ್ಕಾರದ ಮಹತ್ವಕಾಂಶೆಯ ಭೂ ಹಕ್ಕು ನೀಡುವ ಭರವಸೆ ಈಡೇರಿಕೆಗಾಗಿ ತುಮಕೂರು ನಗರಕ್ಕೆ ನವೆಂಬರ್ 7ರಂದು ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಸ್ಲಂ ನಿವಾಸಿಗಳಿಗೆ ವಿತರಣೆ ಮಾಡಲು ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು. ಈ ಸಂಬಂಧ ಕಳೆದ ಅಕ್ಟೋಬರ್ ನಲ್ಲಿ ಸ್ಲಂ ಬೋರ್ಡ್ ಮುತ್ತಿಗೆ ಹಾಕಿ ಎಚ್ಚರಿಕೆ ನೀಡಲಾಗಿತ್ತು. *ಸ್ಲಂ ನಿವಾಸಿಗಳಿಗೆ ಸರ್ಕಾರದ ಆದೇಶದಂತೆ ಹಕ್ಕುಪತ್ರ ವಿತರಣೆ* – *ಜಿಲ್ಲಾಧಿಕಾರಿ ಶುಭಕಲ್ಯಾಣ್* ಪ್ರತಿಭಟನಕಾರರ ಮನವಿಯನ್ನು ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಶುಭಕಲ್ಯಾಣ್ ಜಿಲ್ಲೆಯಲ್ಲಿ ಸರ್ಕಾರದ ಆದೇಶದನ್ವಯ ಇದುವರೆಗೂ ಹಕ್ಕುಪತ್ರಗಳಿಲ್ಲದ 5816 ಕುಟುಂಬಗಳ ಪೈಕಿ 3643 ಕುಟುಂಬಗಳನ್ನು ಸಮೀಕ್ಷೆ ಮಾಡಿದ್ದು ಇದರಲ್ಲಿ 1493 ಕುಟುಂಬಗಳಿಗೆ ಹಕ್ಕುಪತ್ರ ನೀಡಬೇಕಿದೆ. ಕೆಲವೊಂದು ಪ್ರಕ್ರಿಯೆಗಳು ಪೂರ್ಣಗೊಳ್ಳಬೇಕಿದ್ದು ಸ್ಥಳೀಯ ಸಂಸ್ಥೆಗಳಿಂದ ಮಂಡಳಿಗೆ ಮಾಲೀಕತ್ವವನ್ನು ಹಸ್ತಾಂತರಿಸಿದರೇ ಮಾತ್ರ ನೊಂದಣಿಯಾಗಲು ಸಾಧ್ಯ ಮತ್ತು ನವೆಂಬರ್ 29 ರಂದು ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿಗಳು ಹಕ್ಕುಪತ್ರ ವಿತರಣೆ ಮಾಡುತ್ತಿದ್ದು ಅಂದೇ ಜಿಲ್ಲಾ ಉಸ್ತುವಾರಿ ಸಚಿವರ ಸಮುಖದಲ್ಲಿ ಅರ್ಹ ಕುಟುಂಂಬಗಳಿಗೆ ಹಕ್ಕುಪತ್ರ ವಿತರಣೆ ಮಾಡುವ ಸಿದ್ಧತೆ ಮಾಡಿಕೊಳ್ಳಲಾಗಿದೆ ನಾಳೆ ಕಾರ್ಯಕ್ರಮದಲ್ಲಿ ಸ್ಲಂ ನಿವಾಸಿಗಳಿಗೆ ಸಾಂಕೇತಿಕವಾಗಿ ಹಕ್ಕುಪತ್ರ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಜಿಲ್ಲೆಗೆ ಒಟ್ಟು 7178 ಪಿಎಂಎವೈ ಮನೆಗಳು ಮಂಜೂರಾಗಿದ್ದು ಇವುಗಳಲ್ಲಿ 2525 ಮನೆಗಳಲು ಪೂರ್ಣಗೊಂಡಿದ್ದು ಹಸ್ತಾಂತರ ಮಾಡಬೇಕಿದೆ ಎಂದರು. ಈ ಸಂದರ್ಭದಲ್ಲಿ ಸ್ಲಂ ಬೋಡ್ ಇಂಜಿನಿಯರ್ ಬಾನುಪ್ರತಾಪ್ ಸಿಂಹ ಹಾಜರಿದ್ದರು. *ಮುಖ್ಯಮಂತ್ರಿಗಳು ಸಾಮಾಜಿಕ ನ್ಯಾಯದ ಆಶಯದಂತೆ* *ನಡೆದುಕೊಳ್ಳಲಿ-ಎ. ನರಸಿಂಹಮೂರ್ತಿ* ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಸ್ಲಂ ಜನಾಂದೋಲನ ಕರ್ನಾಟಕ ಸಂಚಾಲಕರಾದ ಎ.ನರಸಿಂಹಮೂರ್ತಿ 2023ರ ಚುನಾವಣಾ ಪ್ರಣಾಳಿಕೆಯಲ್ಲಿ ಅಂದರೇ ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಭರವಸೆ ನೀಡಿರುವಂತೆ ನಗರದಲ್ಲಿರುವ ಬಡವರು ಸ್ಲಂ ಜನರಿಗೆ ಸಾಮಾಜಿಕ ನ್ಯಾಯದ ಖಾತ್ರಿಯನ್ನು ಮುಖ್ಯಮಂತ್ರಿಗಳು ಮಾಡಬೇಕಿದೆ, ಸರ್ಕಾರ ಅಸ್ಥಿತ್ವಕ್ಕೆ ಬಂದು 2.5 ವರ್ಷಗಳು ಕಳೆಯುತ್ತ ಬಂದರು ಸ್ಲಂ ಜನರಿಗೆ ನೀಡಿರುವ ಭರವಸೆಯನ್ನು ಈಡೇರಿಸಿಲ್ಲ ಪ್ರಸ್ತುತ ಬಜೆಟ್ ನಲ್ಲಿ ನಮ್ಮ ಜನಸಂಖ್ಯೆಗನುಗುಣವಾಗಿ ಹಣ ಮೀಸಲಿಡುವುದು ಸೇರಿದಂತೆ ಖಾಸಗೀ ಮಾಲೀಕತ್ವದ ಸ್ಲಂಗಳ ಸ್ವಾಧೀನಕ್ಕೆ ಮುಂದಾಗಬೇಕು ಹಾಗೂ ಸರ್ಕಾ ಜಾಗದ ಸ್ಲಂಗಳಿಗೆ ನೀಡುತ್ತಿರುವ ಹಕ್ಕುಪತ್ರವನ್ನು ನೊಂದಣಿಯನ್ನು ತ್ವರಿತಗತಿಯಲ್ಲಿ ಮಾಡಿಕೊಡಬೇಕೆಂದು ಆಗ್ರಹಿಸಿದರು.ಪ್ರತಿಭಟನಾ ನೇತೃತ್ವವನ್ನು ತಿರುಮಲಯ್ಯ, ಶಂಕ್ರಯ್ಯ, ಜಾಬೀರ್ಖಾನ್,ಶಾರದಮ್ಮ, ಗುಲ್ನಾಜ್, ಸಾವಿತ್ರಿ ಬಾಯಿಪುಲೆ ಮಹಿಳಾ ಸಂಘಟನೆಯ ಅನುಪಮಾ, ಪದಾಧಿಕಾರಿಗಳಾದ ಅರುಣ್, ಕೃಷ್ಣಮೂರ್ತಿ, ರಾಮಕೃಷ್ಣ, ಮಂಗಳಮ್ಮ, ಕೆಂಪಣ್ಣ, ಮಾಣಿಕ್ಯಮ್ಮ, ಪೂರ್ಣಿಮಾ, ಮುಬಾರಕ್, ಧನಂಜಯ್, ಅಬಿಬುನ್ನೀಸಾ, ಅಶ್ವತ್, ರಂಗನಾಥ್, ಸಮಾಜ ಸೇವಕ ಮಕ್ದೂಮ್ಆಲಿ, ನಿವೇಶನ ಹೋರಾಟ ಸಮಿತಿಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಸ್ಲಂ ಜನರಿಗೆ ಹಕ್ಕುಪತ್ರ ವಿತರಣೆಗೆ* *ಆಗ್ರಹ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ* *ಪ್ರತಿಭಟನೆ
ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು 205-26ನೇ ಸಾಲಿನ 2ನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ

ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು 205-26ನೇ ಸಾಲಿನ 2ನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾಕ್ಟರ್ ಜಿ ಪರಮೇಶ್ವರ್ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಗಳಾದ ಟಿ.ಬಿ‌.ಜಯಚಂದ್ರ ರವರು, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್ ರವರು, ಬಿ.ಸುರೇಶ್‌ಗೌಡ ರವರು, ಷಡಕ್ಷರಿ ರವರು , ಎಂ.ಟಿ.ಕೃಷ್ಣಪ್ಪ ರವರು, ಸಿ.ಬಿ.ಸುರೇಶ್ ಬಾಬು ರವರು, ಹೆಚ್.ವಿ.ವೆಂಕಟೇಶ್ ರವರು, ವಿಧಾನ ಪರಿಷತ್ ಸದಸ್ಯರಾದ ಚಿದಾನಂದಗೌಡ, ಡಿ.ಟಿ.ಶ್ರೀನಿವಾಸ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ‌ ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್‌ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.

ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು 205-26ನೇ ಸಾಲಿನ 2ನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ
ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು 205-26ನೇ ಸಾಲಿನ 2ನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಂಚಾರಿ ಆರೋಗ್ಯ

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಂಚಾರಿ ಆರೋಗ್ಯ ಘಟಕ ತುಮಕೂರು ಜಿಲ್ಲೆಯ ವತಿಯಿಂದ ಮರಳೂರು ದಿಣ್ಣೆಯಲ್ಲಿ ಲೇಬರ್ ಕಾರ್ಡ್ ಇದ್ದವರಿಗೆ ಉಚಿತ ಆರೋಗ್ಯ ತಪಾಸಣೆಯನ್ನು ಹಮ್ಮಿಕೊಳ್ಳಲಾಗಿತ್ತು ಆರೋಗ್ಯ ಇಲಾಖೆಯ ಡಾಕ್ಟರ್ ಕಿರಣ್ ಮತ್ತು ತರುಣ್, ಹನುಮೇಶ್, ಲೋಲಾಕ್ಷಿ, ಸಿದ್ದರಾಜು ಮತ್ತು ಸಮಾಜ ಸೇವಕರಾದ ಮಕ್ಧೂಮ್ ಅಲಿ ಮತ್ತು ವಾರ್ಡಿನ ಅನೇಕ ಕೂಲಿ ಕಾರ್ಮಿಕರು ಉಚಿತ ಆರೋಗ್ಯ ತಪಾಸಣೆ ಯನ್ನು ಉಪಯೋಗಿಸಿಕೊಂಡರು

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಂಚಾರಿ ಆರೋಗ್ಯ
Call Us Now
WhatsApp