“ಮಕ್ಕಳ ಭವಿಷ್ಯಕ್ಕೆ ಶಕ್ತಿ ತುಂಬಿದ ಕಾಂಗ್ರೆಸ್ ಸರ್ಕಾರ””ಶಾಲಾ ಮಕ್ಕಳ ಆರೋಗ್ಯಕ್ಕೆ ಪೌಷ್ಟಿಕ ಆಹಾರದ ಬಲ”ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಶಾಲಾ ಶಿಕ್ಷಣ ಸಚಿವರಾದ #Madhu_Bangarappa ಅವರ ನೇತೃತ್ವದಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ ವಿತರಣೆ. ಪ್ರೋಟೀನ್, ಕ್ಯಾಲ್ಸಿಯಂ ಮತ್ತು ಕಬ್ಬಿಣ ಅಂಶ ದೊರಕುವ ಮೂಲಕ ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ಗಮನ ಮತ್ತು ಹಾಜರಾತಿಯಲ್ಲಿ ಸುಧಾರಣೆ.♦️ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಣೆಗಾಗಿ ₹1,500 ಕೋಟಿ ವೆಚ್ಚದಲ್ಲಿ ವಾರದಲ್ಲಿ ಆರು ದಿನ ಮೊಟ್ಟೆ ಮತ್ತು ಬಾಳೆಹಣ್ಣು ವಿತರಣೆ.♦️₹100 ಕೋಟಿ ವೆಚ್ಚದಲ್ಲಿ ವಾರದಲ್ಲಿ 5 ದಿನ ಬಿಸಿ ಹಾಲಿನೊಂದಿಗೆ ರಾಗಿ ಮಾಲ್ಟ್ ವಿತರಣೆ.ಮಕ್ಕಳ ಬೆಳವಣಿಗೆಗೆ ಸಹಕರಿಸಿದ ಪ್ರತಿಯೊಬ್ಬ ದಾನಿಗಳಿಗೂ ಸರ್ಕಾರದ ಪರವಾಗಿ ಹಾಗೂ ವಯಕ್ತಿಕವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದರು.#wipro #ajeempremji #annapoornatrust #smsghm @srimadhusudansai #annapoprnatrust #smsghm #oneworldonefamily #srimadhusudansaikannada #bengaluru #ajeempremji #kanataka #cmsiddaramaiah #newsupdate #newmenu #food #freelancing #freefoods #CongressForKarnataka#newmenu #food #school #govtexam #govt #karnatakafood #newsupdate #lifequotes #Education_minister #Madhu_Bangarappa #Team_Madhu_Bangarappa
ಶ್ರೀ ಜೈ ಕರುನಾಡು ರಕ್ಷಣಾ ವೇದಿಕೆಯ ವತಿಯಿಂದ ನಗರದ ಮರಳೂರಿನಲ್ಲಿ ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಿಸಲಾಯಿತು ಕಾರ್ಯಕ್ರಮದಲ್ಲಿ ಸಂಘಟನೆಯ ಗೌರವಾಧ್ಯಕ್ಷರಾದ ಶ್ರೀ ಪರಮೇಶ್ ರವರು ಹಾಗೂ ರಾಜ್ಯಧ್ಯಕ್ಷರಾದ ಶ್ರೀ ಝಬಿವುಲ್ಲಾ(ಬಾಬು) ರವರು ಸೈಯದ್ ಅಲ್ತಾಫ್ ಮತ್ತು ಅಜ್ಗರ್ ಟೈಲೊರ್ ರವರು ಶ್ರೀ ಚಾಂದ್ ಬಾಷಾ ರವರು ಮತ್ತಿತರರು ಭಾಗವಹಿಸಿದ್ದರು
ಚಾಮುಂಡಿ ಬೆಟ್ಟದಲ್ಲಿ ಅಕ್ರಮ ಮನೆಗಳ ತೆರವಿಗೆ ತೇಜಸ್ವಿ ಆಗ್ರಹNovember 10, 2025 – ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಅಕ್ರಮವಾಗಿ ಮನೆಗಳನ್ನು ನಿರ್ಮಿಸಿ ಪರಿಸರ ಹಾಳು ಮಾಡಲಾಗುತ್ತಿದೆ ಎಂದು ಕನ್ನಡ ಕ್ರಾಂತಿದಳದ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ ಗಂಭೀರ ಆರೋಪ ಮಾಡಿದರು.ವಿವಿಧ ಸಂಘಟನೆಗಳೊಂದಿಗೆ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು,ಚಾಮುಂಡಿ ಬೆಟ್ಟದಲ್ಲಿಯಾವುದೇ ಹೊಸ ಮನೆಗಳನ್ನು ನಿರ್ಮಾಣ ಮಾಡದಂತೆ ಆದೇಶ ಇದ್ದರು ಕೂಡ ಚಾಮುಂಡಿ ಬೆಟ್ಟದ ನಿವಾಸಗಳು ಹಾಗೂ ಬೆಟ್ಟಕ್ಕೆ ಬಂದಿರುವ ವಲಸಿಗರು ಅಲ್ಲಿನ ಗ್ರಾಮ ಪಂಚಾಯಿತಿ ಜಾಗಗಳಲ್ಲಿ ಹಾಗೂ ಜಮೀನುಗಳಲ್ಲಿ ಮನೆಗಳನ್ನು ಕಟ್ಟಿ ಬೆಟ್ಟದ ಪರಿಸರವನ್ನು ಹಾಳು ಮಾಡುತ್ತಿದ್ದಾರೆ ಎಂದು ದೂರಿದರು.ಇದರ ಬಗ್ಗೆ ಗಮನ ಹರಿಸಬೇಕಾದ ಆ ಭಾಗದ ಶಾಸಕರಾದ ಜಿ ಟಿ ದೇವೇಗೌಡರು ಮೌನವಾಗಿರುವುದು ದುರಂತದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.ಗ್ರಾಮ ಪಂಚಾಯಿತಿ ಪಿಡಿಒ ಮತ್ತು ತಹಸಿಲ್ದಾರ್ ಹಾಗೂ ಅರಣ್ಯ ಅಧಿಕಾರಿಗಳು ಇದು ತಮ್ಮ ಕೆಲಸವಲ್ಲ ಎಂದು ಬೇಜವಾಬ್ದಾರಿಯಿಂದ ಕಣ್ಣು ಮುಚ್ಚಿ ಕುಳಿತಿದ್ದಾರೆ ಎಂದು ತೇಜಸ್ವಿ ಕಿಡಿಕಾರಿದರು.ಈಗಾಗಲೇ ನಂದಿ ಹತ್ತಿರ ರಸ್ತೆ ಕುಸಿದು ಮೂರು ನಾಲ್ಕು ವರ್ಷಗಳು ಕಳೆದರೂ ಇನ್ನೂ ಸರಿಪಡಿಸಲಾಗಿಲ್ಲ ಮುಂದಿನ ದಿನದಲ್ಲಿ ಮಡಕೇರಿ ರೀತಿಯಲ್ಲಿ ಚಾಮುಂಡಿ ಬೆಟ್ಟವೂ ಕೂಡ ಕುಸಿಯುವುದನ್ನು ನಾವು ನೋಡಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.ಬೆಟ್ಟದಲ್ಲಿ ಅಕ್ರಮವಾಗಿ ಮನೆ ಕಟ್ಟುವ ಮಾಲೀಕರುಗಳಿಗೆ ಎಇಇ ವಿದ್ಯುತ್ ಸಂಪರ್ಕ ಕಲ್ಪಿಸಿ ಕೊಡುವ ಮೂಲಕ ಕಾನೂನು ಉಲ್ಲಂಘಿಸುತ್ತಿದ್ದಾರೆ ಇದರ ಬಗ್ಗೆ ಗಮನಹರಿಸಿ ಅಧಿಕಾರಿಗಳಿಗೆ ಹಾಗೂ ಅಲ್ಲಿನ ಜನರಿಗೆ ಸರಿಯಾದ ಮಾರ್ಗದರ್ಶನ ನೀಡಿ ಅನಧಿಕೃತವಾಗಿ ಕಟ್ಟಿರುವ ಹಾಗೂ ಕಟ್ಟುತ್ತಿರುವ ಮನೆಗಳನ್ನು ತೆರವುಗೊಳಿಸಬೇಕೆಂದು ತೇಜಸ್ವಿ ನಾಗಲಿಂಗಸ್ವಾಮಿ ಮತ್ತಿತರರು ಆಗ್ರಹಿಸಿದರು.ಮುಂದಿನ ದಿನಗಳಲ್ಲಿ ಯಾರೇ ಕಾಮಗಾರಿ ಮಾಡಲು ಮುಂದಾದರೆ ಅಂತಹ ಮನೆಗಳನ್ನು ಹಾಗೂ ಕಟ್ಟಡಗಳನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಕನ್ನಡ ಕ್ರಾಂತಿದಳ , ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ, ಕರ್ನಾಟಕ ಯುವ ಸೇನೆ ವೇದಿಕೆ, ಕರ್ನಾಟಕ ಪ್ರಜಾಶಕ್ತಿ ವೇದಿಕೆ ಸಂಘಟನೆಗಳ ಮುಖಂಡರು ಒತ್ತಾಯಿಸಿದರು.ಸುದ್ದಿಗೋಷ್ಠಿಯಲ್ಲಿ ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಮೈಸೂರು ಜಿಲ್ಲಾಧ್ಯಕ್ಷ ಜಗದೀಶ್, ಕರ್ನಾಟಕ ಯುವ ಸೇನೆ ವೇದಿಕೆ ರಾಜ್ಯಾಧ್ಯಕ್ಷ ಅರುಣ್, ಯುವ ಹೋರಾಟಗಾರ ನಾಗರಾಜ್ ಮದಕರಿ, ನವೀನ್ ಮಹಿಳಾ ಹೋರಾಟಗಾರ್ತಿ ಕಲಾಧನು ಉಪಸ್ಥಿತರಿದ್ದರು.
ತುಮಕೂರು ನಗರ 29 ನೇ ವಾರ್ಡ್ ಮರಳೂರು ಜನತಾ ಕಾಲೋನಿಯ ಡಾ, ಎ ಪಿ ಜೆ ಅಬ್ದುಲ್ ಕಲಾಂ ಆಟೋ ನಿಲ್ದಾಣದ ಬಳಿ ಹಜರತ್ ಟಿಪ್ಪು ಸುಲ್ತಾನ್ ಶಾಹಿದ್ (ರ ಅ ) ಸೇವಾ ಸಮಿತಿ ಟ್ರಸ್ಟ್ ಹಾಗೂ ಎ ಪಿ ಜೆ ಅಬ್ದುಲ್ ಕಲಾಂ ಆಟೋ ಚಾಲಕರು ಮತ್ತು ಮಾಲೀಕರ ಸಂಘ ಜಂಟಿಯಾಗಿ ಅದ್ದೂರಿ ಕನ್ನಡ ರಾಜ್ಯೋತ್ಸವ ವನ್ನು ಆಚರಿಸಲಾಯಿತು ಕಾರ್ಯಕ್ರಮಕ್ಕೆ ತುಮಕೂರು ನಗರದ ಮಾಜಿ ಶಾಸಕರಾದ ಡಾ! ರಫೀಕ್ ಅಹಮದ್ ರವರು. ವಖ್ಫ್ ಬೋರ್ಡ್ ನ ಮಾಜಿ ಅಧ್ಯಕ್ಷರಾದ ಇಕ್ಬಾಲ್ ಅಹಮದ್ ರವರು. ವಾಲ್ಮೀಕಿ ಸಂಘದ ಮತ್ತು ಆಟೋ ಚಾಲಕರ ಜಂಟಿ ಕ್ರಿಯಾ ಸಮಿತಿಯ ರಾಜ್ಯ ಅಧ್ಯಕ್ಷರಾದ ಪ್ರತಾಪ್ ಮದಕರಿ ರವರು. ಕರ್ನಾಟಕ ರಾಜ್ಯ ಸರ್ವ ಜನಾಂಗ ರಕ್ಷಣಾ ವೇದಿಕೆಯ ರಾಜ್ಯ ಅಧ್ಯಕ್ಷರಾದ ಬಾಬಾ ರವರು. ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯರವರು. ಕಾರ್ಮಿಕ ಅಧಿಕಾರಿಗಳಾದಂತಹ ಶ್ರೀಮತಿ ರಕ್ಷಿತಾ ರವರು ಆಟೋ ಚಾಲಕ ಸಂಘದ ಅಧ್ಯಕ್ಷರಾದ ತೌಫಿಕ್ ಅಹಮದ್ ರವರು ಸ್ಥಳೀಯ ಮುಖಂಡರಾದ ಚಂದ್ ಪಾಷರವರು. ಜಾವೀದ್ ರವರು. ಭಾಷಾ ರವರು. ಫೈರೋಜ್ ರವರು ಮತ್ತಿತರ ಮುಖಂಡರು ಭಾಗವಹಿಸಿದ್ದರು ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಲೇಬರ್ ಕಾರ್ಡಗಳನ್ನು ವಿತರಿಸಲಾಯಿತು ಹಾಗೂ ಆಟೋ ಚಾಲಕರನ್ನು ಸನ್ಮಾನಿಸಲಾಯಿತು ಕಾರ್ಯಕ್ರಮವನ್ನು ಹಜರತ್ ಟಿಪ್ಪು ಸುಲ್ತಾನ್ ಶಹೀದ್ ರಹಮತುಲ್ಲಾ ಅಲೈ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಅಬ್ದುಲ್ ಸತ್ತಾರ್ (ಮಹಬೂಬ್ ಸಾಬ್ ) ರವರು ಆಯೋಜಿಸಿದ್ದರು ಕಾರ್ಯಕ್ರಮದ ನಿರೂಪಣೆಯನ್ನು ಸೈಯದ್ ಅಲ್ತಾಫ್ ರವರು ನೆರವೇರಿಸಿದರು ಕಾರ್ಯಕ್ರಮವು ವಂದನಾರ್ಪಣೆಯೊಂದಿಗೆ ಮುಕ್ತಾಯವಾಯಿತು
ಇಂದು ದಾಸಶ್ರೇಷ್ಠ ಶ್ರೀ ಕನಕದಾಸರ 538ನೇ ಜಯಂತಿ ಪ್ರಯುಕ್ತ ತುಮಕೂರು ನಗರದ ಶಿರಾಗೇಟ್‌ನ ಕನಕ ವೃತ್ತದಲ್ಲಿ ಸಾಂಸ್ಕೃತಿಕ ಕಲಾ ಹಾಗೂ ಕನಕ ದಾಸರ ಭಾವಚಿತ್ರ ಮೆರವಣಿಗೆಗೆ ಮಾನ್ಯ ಗೃಹ ಸವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರು ಆದ ಡಾ ಜಿ ಪರಮೇಶ್ವರ್ ರವರು ಚಾಲನೆ ನೀಡಿದರು . ಈ ವೇಳೆ ಶ್ರೀ ಕನಕದಾಸರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದರು .ಈ ಸಂದರ್ಭದಲ್ಲಿ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್ ರವರು, ವಿಧಾನ ಪರಿಷತ್‌ನ ಮಾಜಿ ಸದಸ್ಯ ಡಾ. ಎಂ.ಆರ್.ಹುಲಿನಾಯ್ಕರ್ ರವರು, ಹಿರಿಯ ಪತ್ರಕರ್ತರಾದ ನಾಗಣ್ಣ ರವರು, ಬಿಎಂಟಿಸಿ ಉಪಾಧ್ಯಕ್ಷರಾದ ನಿಕೇತ್ ರಾಜ್ ಮೌರ್ಯ ರವರು, ಜಿಲ್ಲಾಧಿಕಾರಿ ಗಳಾದಶುಭ ಕಲ್ಯಾಣ್ ರವರು , ಜಿಲ್ಲಾ ಪಂಚಾಯತ್ ಸಿಇಒ ಪ್ರಭು ರವರುಹಾಗೂ ಕುರುಬ ಸಮಾಜದ ಹಿರಿಯ ಮುಖಂಡರುಗಳು ಹಾಗೂ ಇನ್ನಿತರರು ಹಾಜರಿದ್ದರು.
ತುಮಕೂರಿನ ಬಿದರಕಟ್ಟೆಯಲ್ಲಿ ಇಂದು ತುಮಕೂರು ವಿಶ್ವವಿದ್ಯಾನಿಲಯದ ಜ್ಞಾನಸಿರಿ ಕ್ಯಾಂಪಸ್ ಹಾಗೂ ವಿವಿಧ ನೂತನ ಕಟ್ಟಡಗಳ ಉದ್ಘಾಟನೆಯನ್ನು ಗೌರವಾನ್ವಿತಾ ರಾಜ್ಯಪಾಲರಾದ ಶ್ರೀ Dr. ಥಾವರ್ ಚಂದ್ ಗೆಹ್ಲೋಟ್ ರವರು ನೆರವೇರಿಸಿದರು.ದೇಶದಲ್ಲಿ ಪ್ರತಿವರ್ಷ 12 ಲಕ್ಷ ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಪದವೀಧರರು ಹೊರಬರುತ್ತಿದ್ದಾರೆ. ಇದರಿಂದ ಜಗತ್ತಿನಾದ್ಯಂತ ಪ್ರತಿಭೆಗಳ ಮಹಾಪೂರವೇ ಹರಿಯುತ್ತಿದೆ. ಅಂದಿನ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರೂ ಅವರು ಶಿಕ್ಷಣಕ್ಕೆ ಒತ್ತು ನೀಡಿದ ಪರಿಣಾಮ ಶಿಕ್ಷಣ ಕ್ರಾಂತಿಯಾಗಿದೆ. ಯುವ ಸಮುದಾಯ ಆಧುನಿಕ ಜಗತ್ತಿಗೆ ಒಗ್ಗಿಕೊಳ್ಳಬೇಕಿದೆ. ಎಐ ಮತ್ತು ರೋಬೋಟಿಕ್ ತಂತ್ರಜ್ಞಾನದಂತಹ ಹೊಸ ಅನ್ವೇಷಣೆಗಳತ್ತ ಗಮನ ಹರಿಸಬೇಕು. ಬದಲಾವಣೆಗಳತ್ತ ಕಲಿಕೆಗೆ ದೃಷ್ಟಿಹರಿಸಬೇಕು.ತುಮಕೂರು ಜಿಲ್ಲೆ ಈಗಾಗಲೇ ಶಿಕ್ಷಣ ಕಾಶಿ ಎಂಬುದನ್ನು ಸಾಬೀತು ಮಾಡಿದೆ. ಮೂರು ವೈದ್ಯಕೀಯ ಕಾಲೇಜುಗಳು, ಎಂಜಿನಿಯರಿಂಗ್ ಕಾಲೇಜುಗಳು, ಪ್ರತಿ ತಾಲೂಕಿನಲ್ಲೂ ಪದವಿ ಕಾಲೇಜುಗಳು ಇದ್ದು, ಗ್ರಾಮೀಣ ಪ್ರದೇಶದ ಬಡವರಿಗೆ, ಪರಿಶಿಷ್ಟ ಹಾಗೂ ಹಿಂದುಳಿದ ಬಡ ವಿದ್ಯಾರ್ಥಿಗಳು ಸೇರಿದಂತೆ ಅಪಾರ ಪ್ರಮಾಣದಲ್ಲಿ ಅನುಕೂಲವಾಗುತ್ತಿದೆ. ಪ್ರಸ್ತುತ ತುಮಕೂರು ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್‌ಗೆ ಹೆದ್ದಾರಿ ಸಂಪರ್ಕ ರಸ್ತೆ, ಬೋಧಕ ಸಿಬ್ಬಂದಿ ಸೇರಿದಂತೆ ಹಣಕಾಸಿನ ನೆರವು ಅಗತ್ಯವಿದೆ. ಸರ್ಕಾರ ಮುಂದಿನ ದಿನಗಳಲ್ಲಿ ಅಗತ್ಯ ನೆರವು ನೀಡಲಿದೆ ಎಂದು ಕಾರ್ಯಕ್ರಮವನ್ನು ಉದ್ದೇಶಿಸಿ ಮಾನ್ಯ ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಜಿ ಪರಮೇಶ್ವರ್ ರವರು ಮಾತನಾಡಿದರು.ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವರಾದ ಎಂ.ಸಿ. ಸುಧಾಕರ್ ರವರು, ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಟಿ.ಬಿ.ಜಯಚಂದ್ರ ರವರು, ಶಾಸಕರುಗಳಾದ ಬಿ.ಸುರೇಶ್‌ಗೌಡರವರು , ಜಿ.ಬಿ. ಜ್ಯೋತಿ ಗಣೇಶ ರವರುತುಮಕೂರು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಎಂ.ವೆಂಕಟೇಶ್ವರಲು ಮುಂತಾದವರು ಉಪಸ್ಥಿತರಿದ್ದರು.
*ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಸ್ಲಂ ಜನರಿಗೆ ಹಕ್ಕುಪತ್ರ ವಿತರಣೆಗೆ* *ಆಗ್ರಹ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ* *ಪ್ರತಿಭಟನೆ* ಇಂದು ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ತುಮಕೂರು ಜಿಲ್ಲೆಯಲ್ಲಿರುವ ಸ್ಲಂ ನಿವಾಸಿಗಳಿಗೆ ಸರ್ಕಾರದ ಮಹತ್ವಕಾಂಶೆಯ ಭೂ ಹಕ್ಕು ನೀಡುವ ಭರವಸೆ ಈಡೇರಿಕೆಗಾಗಿ ತುಮಕೂರು ನಗರಕ್ಕೆ ನವೆಂಬರ್ 7ರಂದು ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಸ್ಲಂ ನಿವಾಸಿಗಳಿಗೆ ವಿತರಣೆ ಮಾಡಲು ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು. ಈ ಸಂಬಂಧ ಕಳೆದ ಅಕ್ಟೋಬರ್ ನಲ್ಲಿ ಸ್ಲಂ ಬೋರ್ಡ್ ಮುತ್ತಿಗೆ ಹಾಕಿ ಎಚ್ಚರಿಕೆ ನೀಡಲಾಗಿತ್ತು. *ಸ್ಲಂ ನಿವಾಸಿಗಳಿಗೆ ಸರ್ಕಾರದ ಆದೇಶದಂತೆ ಹಕ್ಕುಪತ್ರ ವಿತರಣೆ* – *ಜಿಲ್ಲಾಧಿಕಾರಿ ಶುಭಕಲ್ಯಾಣ್* ಪ್ರತಿಭಟನಕಾರರ ಮನವಿಯನ್ನು ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಶುಭಕಲ್ಯಾಣ್ ಜಿಲ್ಲೆಯಲ್ಲಿ ಸರ್ಕಾರದ ಆದೇಶದನ್ವಯ ಇದುವರೆಗೂ ಹಕ್ಕುಪತ್ರಗಳಿಲ್ಲದ 5816 ಕುಟುಂಬಗಳ ಪೈಕಿ 3643 ಕುಟುಂಬಗಳನ್ನು ಸಮೀಕ್ಷೆ ಮಾಡಿದ್ದು ಇದರಲ್ಲಿ 1493 ಕುಟುಂಬಗಳಿಗೆ ಹಕ್ಕುಪತ್ರ ನೀಡಬೇಕಿದೆ. ಕೆಲವೊಂದು ಪ್ರಕ್ರಿಯೆಗಳು ಪೂರ್ಣಗೊಳ್ಳಬೇಕಿದ್ದು ಸ್ಥಳೀಯ ಸಂಸ್ಥೆಗಳಿಂದ ಮಂಡಳಿಗೆ ಮಾಲೀಕತ್ವವನ್ನು ಹಸ್ತಾಂತರಿಸಿದರೇ ಮಾತ್ರ ನೊಂದಣಿಯಾಗಲು ಸಾಧ್ಯ ಮತ್ತು ನವೆಂಬರ್ 29 ರಂದು ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿಗಳು ಹಕ್ಕುಪತ್ರ ವಿತರಣೆ ಮಾಡುತ್ತಿದ್ದು ಅಂದೇ ಜಿಲ್ಲಾ ಉಸ್ತುವಾರಿ ಸಚಿವರ ಸಮುಖದಲ್ಲಿ ಅರ್ಹ ಕುಟುಂಂಬಗಳಿಗೆ ಹಕ್ಕುಪತ್ರ ವಿತರಣೆ ಮಾಡುವ ಸಿದ್ಧತೆ ಮಾಡಿಕೊಳ್ಳಲಾಗಿದೆ ನಾಳೆ ಕಾರ್ಯಕ್ರಮದಲ್ಲಿ ಸ್ಲಂ ನಿವಾಸಿಗಳಿಗೆ ಸಾಂಕೇತಿಕವಾಗಿ ಹಕ್ಕುಪತ್ರ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಜಿಲ್ಲೆಗೆ ಒಟ್ಟು 7178 ಪಿಎಂಎವೈ ಮನೆಗಳು ಮಂಜೂರಾಗಿದ್ದು ಇವುಗಳಲ್ಲಿ 2525 ಮನೆಗಳಲು ಪೂರ್ಣಗೊಂಡಿದ್ದು ಹಸ್ತಾಂತರ ಮಾಡಬೇಕಿದೆ ಎಂದರು. ಈ ಸಂದರ್ಭದಲ್ಲಿ ಸ್ಲಂ ಬೋಡ್ ಇಂಜಿನಿಯರ್ ಬಾನುಪ್ರತಾಪ್ ಸಿಂಹ ಹಾಜರಿದ್ದರು. *ಮುಖ್ಯಮಂತ್ರಿಗಳು ಸಾಮಾಜಿಕ ನ್ಯಾಯದ ಆಶಯದಂತೆ* *ನಡೆದುಕೊಳ್ಳಲಿ-ಎ. ನರಸಿಂಹಮೂರ್ತಿ* ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಸ್ಲಂ ಜನಾಂದೋಲನ ಕರ್ನಾಟಕ ಸಂಚಾಲಕರಾದ ಎ.ನರಸಿಂಹಮೂರ್ತಿ 2023ರ ಚುನಾವಣಾ ಪ್ರಣಾಳಿಕೆಯಲ್ಲಿ ಅಂದರೇ ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಭರವಸೆ ನೀಡಿರುವಂತೆ ನಗರದಲ್ಲಿರುವ ಬಡವರು ಸ್ಲಂ ಜನರಿಗೆ ಸಾಮಾಜಿಕ ನ್ಯಾಯದ ಖಾತ್ರಿಯನ್ನು ಮುಖ್ಯಮಂತ್ರಿಗಳು ಮಾಡಬೇಕಿದೆ, ಸರ್ಕಾರ ಅಸ್ಥಿತ್ವಕ್ಕೆ ಬಂದು 2.5 ವರ್ಷಗಳು ಕಳೆಯುತ್ತ ಬಂದರು ಸ್ಲಂ ಜನರಿಗೆ ನೀಡಿರುವ ಭರವಸೆಯನ್ನು ಈಡೇರಿಸಿಲ್ಲ ಪ್ರಸ್ತುತ ಬಜೆಟ್ ನಲ್ಲಿ ನಮ್ಮ ಜನಸಂಖ್ಯೆಗನುಗುಣವಾಗಿ ಹಣ ಮೀಸಲಿಡುವುದು ಸೇರಿದಂತೆ ಖಾಸಗೀ ಮಾಲೀಕತ್ವದ ಸ್ಲಂಗಳ ಸ್ವಾಧೀನಕ್ಕೆ ಮುಂದಾಗಬೇಕು ಹಾಗೂ ಸರ್ಕಾ ಜಾಗದ ಸ್ಲಂಗಳಿಗೆ ನೀಡುತ್ತಿರುವ ಹಕ್ಕುಪತ್ರವನ್ನು ನೊಂದಣಿಯನ್ನು ತ್ವರಿತಗತಿಯಲ್ಲಿ ಮಾಡಿಕೊಡಬೇಕೆಂದು ಆಗ್ರಹಿಸಿದರು.ಪ್ರತಿಭಟನಾ ನೇತೃತ್ವವನ್ನು ತಿರುಮಲಯ್ಯ, ಶಂಕ್ರಯ್ಯ, ಜಾಬೀರ್ಖಾನ್,ಶಾರದಮ್ಮ, ಗುಲ್ನಾಜ್, ಸಾವಿತ್ರಿ ಬಾಯಿಪುಲೆ ಮಹಿಳಾ ಸಂಘಟನೆಯ ಅನುಪಮಾ, ಪದಾಧಿಕಾರಿಗಳಾದ ಅರುಣ್, ಕೃಷ್ಣಮೂರ್ತಿ, ರಾಮಕೃಷ್ಣ, ಮಂಗಳಮ್ಮ, ಕೆಂಪಣ್ಣ, ಮಾಣಿಕ್ಯಮ್ಮ, ಪೂರ್ಣಿಮಾ, ಮುಬಾರಕ್, ಧನಂಜಯ್, ಅಬಿಬುನ್ನೀಸಾ, ಅಶ್ವತ್, ರಂಗನಾಥ್, ಸಮಾಜ ಸೇವಕ ಮಕ್ದೂಮ್ಆಲಿ, ನಿವೇಶನ ಹೋರಾಟ ಸಮಿತಿಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು 205-26ನೇ ಸಾಲಿನ 2ನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾಕ್ಟರ್ ಜಿ ಪರಮೇಶ್ವರ್ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಗಳಾದ ಟಿ.ಬಿ.ಜಯಚಂದ್ರ ರವರು, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್ ರವರು, ಬಿ.ಸುರೇಶ್‌ಗೌಡ ರವರು, ಷಡಕ್ಷರಿ ರವರು , ಎಂ.ಟಿ.ಕೃಷ್ಣಪ್ಪ ರವರು, ಸಿ.ಬಿ.ಸುರೇಶ್ ಬಾಬು ರವರು, ಹೆಚ್.ವಿ.ವೆಂಕಟೇಶ್ ರವರು, ವಿಧಾನ ಪರಿಷತ್ ಸದಸ್ಯರಾದ ಚಿದಾನಂದಗೌಡ, ಡಿ.ಟಿ.ಶ್ರೀನಿವಾಸ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಂಚಾರಿ ಆರೋಗ್ಯ ಘಟಕ ತುಮಕೂರು ಜಿಲ್ಲೆಯ ವತಿಯಿಂದ ಮರಳೂರು ದಿಣ್ಣೆಯಲ್ಲಿ ಲೇಬರ್ ಕಾರ್ಡ್ ಇದ್ದವರಿಗೆ ಉಚಿತ ಆರೋಗ್ಯ ತಪಾಸಣೆಯನ್ನು ಹಮ್ಮಿಕೊಳ್ಳಲಾಗಿತ್ತು ಆರೋಗ್ಯ ಇಲಾಖೆಯ ಡಾಕ್ಟರ್ ಕಿರಣ್ ಮತ್ತು ತರುಣ್, ಹನುಮೇಶ್, ಲೋಲಾಕ್ಷಿ, ಸಿದ್ದರಾಜು ಮತ್ತು ಸಮಾಜ ಸೇವಕರಾದ ಮಕ್ಧೂಮ್ ಅಲಿ ಮತ್ತು ವಾರ್ಡಿನ ಅನೇಕ ಕೂಲಿ ಕಾರ್ಮಿಕರು ಉಚಿತ ಆರೋಗ್ಯ ತಪಾಸಣೆ ಯನ್ನು ಉಪಯೋಗಿಸಿಕೊಂಡರು