ತುಮಕೂರು: ವೀರಸೌಧದಲ್ಲಿ ಕಾನೂನು ಸೇವಾ ಕೇಂದ್ರ ಉದ್ಘಾಟನೆ – ಯೋಧರು ಹಾಗೂ ಕುಟುಂಬಗಳಿಗೆ ಕಾನೂನು ಅರಿವು ಕಾರ್ಯಕ್ರಮತುಮಕೂರು ನಗರದ ಜೆ.ಸಿ. ರಸ್ತೆಯಲ್ಲಿರುವ ವೀರಸೌಧ ಕಟ್ಟಡದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಸೈನಿಕರ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು ಗ್ರಾಮಾಂತರ ಹಾಗೂ ತುಮಕೂರು ಜಿಲ್ಲಾ ಸೈನಿಕರು, ಮಾಜಿ ಯೋಧರು ಮತ್ತು ಅವಲಂಬಿತರ ಸಮಿತಿಯ ಸಹಯೋಗದಲ್ಲಿ ಕಾನೂನು ಸೇವಾ ಕೇಂದ್ರದ ಉದ್ಘಾಟನೆ

ತುಮಕೂರು: ವೀರಸೌಧದಲ್ಲಿ ಕಾನೂನು ಸೇವಾ ಕೇಂದ್ರ ಉದ್ಘಾಟನೆ – ಯೋಧರು ಹಾಗೂ ಕುಟುಂಬಗಳಿಗೆ ಕಾನೂನು ಅರಿವು ಕಾರ್ಯಕ್ರಮತುಮಕೂರು ನಗರದ ಜೆ.ಸಿ. ರಸ್ತೆಯಲ್ಲಿರುವ ವೀರಸೌಧ ಕಟ್ಟಡದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಸೈನಿಕರ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು ಗ್ರಾಮಾಂತರ ಹಾಗೂ ತುಮಕೂರು ಜಿಲ್ಲಾ ಸೈನಿಕರು, ಮಾಜಿ ಯೋಧರು ಮತ್ತು ಅವಲಂಬಿತರ ಸಮಿತಿಯ ಸಹಯೋಗದಲ್ಲಿ ಕಾನೂನು ಸೇವಾ ಕೇಂದ್ರದ ಉದ್ಘಾಟನೆ ಹಾಗೂ ವೀರ ಪರಿವಾರ ಸಹಾಯತ ಯೋಜನೆ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮವನ್ನು ತುಮಕೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಲೋಕೇಶ ಧನಪಾಲ ಹವಲೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಯೋಧರು, ಮಾಜಿ ಯೋಧರು ಹಾಗೂ ಅವರ ಕುಟುಂಬದ ಅವಲಂಬಿತರಿಗೆ ಲಭ್ಯವಿರುವ ಕಾನೂನು ಸೇವೆಗಳು ಮತ್ತು ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ಮಾತನಾಡಿ, ದೇಶದ ಗಡಿಯನ್ನು ಹಗಲು-ರಾತ್ರಿ, ಮಳೆ-ಚಳಿ ಎನ್ನದೆ ರಕ್ಷಿಸುವ ಸೈನಿಕರ ಸೇವೆ ಅಪಾರವಾಗಿದೆ. ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿಯೂ ಸೈನಿಕರ ಪಾತ್ರ ಮಹತ್ವದ್ದಾಗಿದೆ. ಅಂತಹ ಯೋಧರು ಮತ್ತು ಅವರ ಕುಟುಂಬಗಳಿಗೆ ಕಾನೂನು ಅರಿವು ಹಾಗೂ ಕಾನೂನು ಸೌಲಭ್ಯಗಳನ್ನು ಒದಗಿಸುವುದು ಪೊಲೀಸ್ ಇಲಾಖೆ ಮತ್ತು ನ್ಯಾಯಾಂಗ ಇಲಾಖೆಯ ಜವಾಬ್ದಾರಿಯಾಗಿದೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ 4 ಕರ್ನಾಟಕ ಎನ್‌ಸಿಸಿ ಬೆಟಾಲಿಯನ್ ಉಪ ಕಮಾಂಡೆಂಟ್ ಲೆಫ್ಟಿನೆಂಟ್ ಕರ್ನಲ್ ಎಸ್. ಅಭಿಲಾಷ್, ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಉಮೇಶ್ ಚಂದ್ರ ಎನ್.ಆರ್., ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕ ಮೇಜರ್ ಬಾಲಸುಬ್ರಹ್ಮಣ್ಯಂ, ಜಿಲ್ಲಾ ಮಾಜಿ ಸೈನಿಕರ ಸಮನ್ವಯ ಸಮಿತಿ ಅಧ್ಯಕ್ಷ ಬೊಮ್ಮಲಿಂಗಣ್ಣ, ಕಾರ್ಯದರ್ಶಿ ವಿ.ಡಿ. ನಾಗರಾಜ್, ಡಾ. ಹಿರೇಮಠ್, ಕರ್ನಲ್ ಗಿರೀಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.ವರದಿ: ಉದಯಕುಮಾರ್ಕಲ್ಪತರು ನ್ಯೂಸ್, ತುಮಕೂರು