ಮುಸ್ಲಿಂ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಅನ್ಯಾಯ: ಕಾಂಗ್ರೆಸ್ಸರ್ಕಾರದ ವಿರುದ್ಧ ತೀವ್ರ ಆಕ್ರೋಶಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ನೂತನ ಸಚಿವ ಸಂಪುಟ ರಚನೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಮಾಡಿರುವ ಅನ್ಯಾಯವನ್ನು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾಧ್ಯಕ್ಷರು ತಾಜುದ್ದೀನ್ ಷರೀಫ್ ಆಕ್ರೋಶ ವ್ಯಕ್ತಪಡಿಸಿದರು

ಮುಸ್ಲಿಂ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಅನ್ಯಾಯ: ಕಾಂಗ್ರೆಸ್ಸರ್ಕಾರದ ವಿರುದ್ಧ ತೀವ್ರ ಆಕ್ರೋಶಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ನೂತನ ಸಚಿವ ಸಂಪುಟ ರಚನೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಮಾಡಿರುವ ಅನ್ಯಾಯವನ್ನು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾಧ್ಯಕ್ಷರು ತಾಜುದ್ದೀನ್ ಷರೀಫ್ ಆಕ್ರೋಶ ವ್ಯಕ್ತಪಡಿಸಿದರು. ಚುನಾವಣೆಯ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಪರವಾಗಿ ದೊಡ್ಡ ದೊಡ್ಡ ಭರವಸೆಗಳನ್ನು ನೀಡಿದ್ದ ಕಾಂಗ್ರೆಸ್, ಅಧಿಕಾರಕ್ಕೆ ಬಂದ ನಂತರ ಮುಸ್ಲಿಂ ಸಮುದಾಯವನ್ನು ಕಡೆಗಣಿಸಿರುವುದು ಸ್ಪಷ್ಟವಾಗಿದೆ.ರಾಜ್ಯದ ಜನಸಂಖ್ಯೆಯಲ್ಲಿ ಗಣನೀಯ ಪಾಲು ಹೊಂದಿರುವ ಹಾಗೂ ಕಾಂಗ್ರೆಸ್ ಪಕ್ಷದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿರುವ ಮುಸ್ಲಿಂ ಸಮುದಾಯಕ್ಕೆ ಪ್ರಥಮ ಹಂತದ ಸಚಿವ ಸಂಪುಟದಲ್ಲಿ ಕೇವಲ ಒಬ್ಬ ಮುಸ್ಲಿಂ ಶಾಸಕರಿಗೆ ಮಾತ್ರ ಸಚಿವ ಸ್ಥಾನ ನೀಡಿರುವುದು ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ. ಸಮುದಾಯದ ಜನಸಂಖ್ಯೆ ಮತ್ತು ರಾಜಕೀಯ ಪ್ರಾತಿನಿಧ್ಯವನ್ನು ಪರಿಗಣಿಸಿದರೆ ಕನಿಷ್ಠ ಎರಡು ಅಥವಾ ಮೂರು ಸಚಿವ ಸ್ಥಾನಗಳನ್ನು ನೀಡಬೇಕಾಗಿತ್ತು.ಮುಸ್ಲಿಂ ಸಮುದಾಯದ ಮತಗಳನ್ನು ಪಡೆಯುವ ಸಂದರ್ಭದಲ್ಲಿ ಮಾತ್ರ ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯದ ಮಾತುಗಳನ್ನು ಹೇಳುವ ಕಾಂಗ್ರೆಸ್, ಅಧಿಕಾರ ಹಂಚಿಕೆಯ ಸಂದರ್ಭದಲ್ಲಿ ಮುಸ್ಲಿಮರನ್ನು ಕಡೆಗಣಿಸಿರುವುದು ಅದರ ದ್ವಂದ್ವ ನೀತಿಯನ್ನು ಬಯಲಿಗೆಳೆಯುತ್ತದೆ.ಇದು ಕೇವಲ ಪ್ರಾತಿನಿಧ್ಯದ ಪ್ರಶ್ನೆಯಲ್ಲ, ಸಂವಿಧಾನಾತ್ಮಕ ಸಮಾನತೆಯ ಪ್ರಶ್ನೆಯಾಗಿದೆ.ಆದ್ದರಿಂದ, ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ಕನಿಷ್ಠ ನಾಲ್ಕು ಮುಸ್ಲಿಂ ಶಾಸಕರಿಗೆ ಸಚಿವ ಸ್ಥಾನ ನೀಡುವ ಮೂಲಕ ಮುಸ್ಲಿಂ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು. ಇಲ್ಲವಾದಲ್ಲಿ ರಾಜ್ಯದಾದ್ಯಂತ ಪ್ರಜಾಸತ್ತಾತ್ಮಕ ರೀತಿಯಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸುತ್ತೇವೆ.

