ಬಾಗಿದ ವಿದ್ಯುತ್‌ ಕಂಬಗಳಿಂದ ಆತಂಕ: ತಕ್ಷಣ ಸರಿಪಡಿಸುವಂತೆ ಗ್ರಾಮಸ್ಥರ ಒತ್ತಾಯಲಿಂಗಸುಗೂರು: ತಾಲ್ಲೂಕಿನ ಹಟ್ಟಿ ಚಿನ್ನದ ಗಣಿ ಸಮೀಪದ ರೋಡಲಬಂಡ, ತವಗ, ಯಲಗಟ್ಟಾ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಹಲವು ಸ್ಥಳಗಳಲ್ಲಿ ವಿದ್ಯುತ್ ಕಂಬಗಳು ಮುಖ್ಯ ರಸ್ತೆ ಬದಿಯಲ್ಲಿ ಹಾಗೂ ರೈತರ ಹೋಲದಲ್ಲಿ ಬಾಗಿಕೊಂಡು ನಿಂತಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ

ಬಾಗಿದ ವಿದ್ಯುತ್‌ ಕಂಬಗಳಿಂದ ಆತಂಕ: ತಕ್ಷಣ ಸರಿಪಡಿಸುವಂತೆ ಗ್ರಾಮಸ್ಥರ ಒತ್ತಾಯಲಿಂಗಸುಗೂರು: ತಾಲ್ಲೂಕಿನ ಹಟ್ಟಿ ಚಿನ್ನದ ಗಣಿ ಸಮೀಪದ ರೋಡಲಬಂಡ, ತವಗ, ಯಲಗಟ್ಟಾ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಹಲವು ಸ್ಥಳಗಳಲ್ಲಿ ವಿದ್ಯುತ್ ಕಂಬಗಳು ಮುಖ್ಯ ರಸ್ತೆ ಬದಿಯಲ್ಲಿ ಹಾಗೂ ರೈತರ ಹೋಲದಲ್ಲಿ ಬಾಗಿಕೊಂಡು ನಿಂತಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.ಈ ಬಗ್ಗೆ ಸಂಬಂಧಪಟ್ಟ ವಿದ್ಯುತ್ ಸರಬರಾಜು ಇಲಾಖೆಯ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಬಾಗಿದ ವಿದ್ಯುತ್ ಕಂಬಗಳು ಯಾವುದೇ ಸಮಯದಲ್ಲಿ ಕುಸಿದು ಬೀಳುವ ಭೀತಿ ಇದ್ದು, ಇದರಿಂದ ಊರಿನ ಸಾರ್ವಜನಿಕರು ಹಾಗೂ ವಾಹನ ಸಂಚಾರಿಗರು ಭಯಭೀತರಾಗಿ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.ಇಂತಹ ಅಪಾಯಕಾರಿ ಸ್ಥಿತಿಗೆ ತಕ್ಷಣವೇ ಸ್ಪಂದಿಸಿ, ಬಾಗಿದ ಹಾಗೂ ಜೀರ್ಣಗೊಂಡ ವಿದ್ಯುತ್ ಕಂಬಗಳನ್ನು ಕೂಡಲೇ ಸರಿಪಡಿಸಿ ಸಾರ್ವಜನಿಕರ ಜೀವಳಿಸ್ತಿಗೆ ರಕ್ಷಣೆ ಒದಗಿಸಬೇಕೆಂದು ಗ್ರಾಮಸ್ಥರು ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ